ದೆಹಲಿಯಲ್ಲಿ ವಾಯುಮಾಲಿನ್ಯ ಏರುತ್ತಿರುವುದಕ್ಕೆ ಆಪ್ ಸರ್ಕಾರ ಜವಾಬ್ದಾರಿ ಹೊರಬೇಕು; ಕ್ರಿಕೆಟಿಗ ಗಂಭೀರ್

ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವುದಕ್ಕೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದ ವಿರುದ್ಧ ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ...
ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್
ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವುದಕ್ಕೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದ ವಿರುದ್ಧ ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದೆಹಲಿ ನಮ್ಮದು. ಅದರ ಬಗ್ಗೆ ಮಾತನಾಡುವ ಹಾಗೂ ನಿಲುವು ತೆಗೆದುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲೆಯೂ ಇದೆ. ನಾನು ಬಿಜೆಪಿ ಅಧವಾ ಕಾಂಗ್ರೆಸ್ ಪರ ವ್ಯಕ್ತಿಯಲ್ಲ. ಅಧಿಕಾರದಲ್ಲಿರುವ ಸರ್ಕಾರ ಜವಾಬ್ದಾರಿ ಹೊತ್ತುಕೊಳ್ಳಬೇಕು. ಆಮ್ ಆದ್ಮಿ ಪಕ್ಷ ವಾಯು ಮಾಲಿನ್ಯದ ಜವಾಬ್ದಾರಿ ಹೊತ್ತುಕೊಳ್ಳಬೇಕೆಂದು ಹೇಳಿದ್ದಾರೆ. 
ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವುದಕ್ಕೆ ಪಟಾಕಿ ಸುಡುವುದು ಹಾಗೂ ಇತರೆ ಕಾರಣಗಳನ್ನು ನೀಡಬಾರದು. ವರ್ಷಗಳಿಂದಲೂ ದೆಹಲಿಯಲ್ಲಿ ವಾಯುಮಾಲಿನ್ಯ ಕೆಡುತ್ತಲೇ ಇದೆ. ವಾಯು ಮಾಲಿನ್ಯಕ್ಕೆ ಕಾರಣಗಳನ್ನು ನೀಡುವ ಬದಲು ಆಪ್ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಅಧಿಕಾರಿಗಳನ್ನು ದೂಷಿಸಬೇಕು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com