ನಾನು ಪ್ರಧಾನ ಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ: ಅಖಿಲೇಶ್ ಯಾದವ್

: ನಾನು ಪ್ರಧಾನ ಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ, ನನಗೆ ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಕೆಲಸಗಳು ಮುಖ್ಯ ಎಂದು ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಮುಖಂಡ...
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ನವದೆಹಲಿ: ನಾನು ಪ್ರಧಾನ ಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ, ನನಗೆ ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಕೆಲಸಗಳು ಮುಖ್ಯ ಎಂದು ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಹೇಳಿದ್ದಾರೆ.

ಪತ್ರಕರ್ತರಾದ ಪ್ರಿಯಾ ಸಹಗಲ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ  ಅಖಿಲೇಶ್ ಯಾದವ್, ವಿರೋಧ ಪಕ್ಷಗಳು ಒಂದಾಗಿ ರಚಿಸಿರುವ ಮಹಾಘಟ್ ಬಂಧನ್  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಸಿದ್ಧತೆ ನಡೆಸುತ್ತಿದ್ದಾರೆ,

ಮುಂದಿನ ಪ್ರಧಾನ ಮಂತ್ರಿ ಅಭ್ಯರ್ಥಿ ಆಯ್ಕೆ ಹಾಗೂ ಆಕಾಂಕ್ಷಿಗಳ ಬಗ್ಗೆ  ವೀರ್ ಸಾಂಘ್ವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್,  ನಾನು ಪ್ರಧಾನ ಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ, ತಾವು ಸಿಎಂ ಆಗಿದ್ದಾಗ ಜಾರಿಗೆ ತಂದ ಯೋಜನೆಗಳನ್ನು ಮುನ್ನಡೆಸಿಕೊಂಡು ಹೋಗಬೇಕಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com