ಪಕ್ಷ ವಿರೋಧಿ ಚಟುವಟಿಕೆ: ಆಮ್ ಆದ್ಮಿ ಪಕ್ಷದ ಇಬ್ಬರು ಶಾಸಕರ ಅಮಾನತು

ಪಂಜಾಬ್ ನ ಆಮ್ ಆದ್ಮಿ ಪಕ್ಷದ ಶಾಸಕರಾದ ಸುಖ್ ಪಾಲ್ ಸಿಂಗ್ ಖೈರಾ, ಕನ್ವರ್ ಸಂಧು ಅವರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ.
AAP suspends 2 Punjab MLAs for 'anti-party activities'
AAP suspends 2 Punjab MLAs for 'anti-party activities'
Updated on: 
ಚಂಡೀಗಢ: ಪಂಜಾಬ್ ನ ಆಮ್ ಆದ್ಮಿ ಪಕ್ಷದ ಶಾಸಕರಾದ ಸುಖ್ ಪಾಲ್ ಸಿಂಗ್ ಖೈರಾ, ಕನ್ವರ್ ಸಂಧು ಅವರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ. 
ಪಕ್ಷದ ಇಬ್ಬರು ಶಾಸಕರಾದ ಸುಖ್ ಪಾಲ್ ಸಿಂಗ್ ಖೈರಾ, ಕನ್ವರ್ ಸಂಧು ನಿರಂತರವಾಗಿ ಕೇಂದ್ರ ಹಾಗೂ ರಾಜ್ಯ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತಿದೆ ಎಂದು ಪಕ್ಷದ ಹೇಳಿಕೆಯಲ್ಲಿ ತಿಳಿಸಲಾಗಿದೆ. 
ಅಶಿಸ್ತು ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಇಬ್ಬರೂ ನಾಯಕರನ್ನು ಪಕ್ಷದಿಂದ ಅಮಾನತುಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ಪ್ರಕಟಣೆ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com