ಹಾವು ಕಚ್ಚಿದ ಹಿನ್ನೆಲೆಯಲ್ಲಿ ಬಾಲಕಿಯನ್ನು ಆಸ್ಪತ್ರೆಯ ಐಸಿಯುಗೆ ದಾಖಲಿಸಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚೇತರಿಕೆ ಕಂಡುಬಂದ ಬಳಿಕ ಆಕೆಯನ್ನು ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಯಿತು. ಈ ವೇಳೆ ಐಸಿಯುನಲ್ಲಿ ನಡೆದ ಘಟನೆ ಬಗ್ಗೆ ಆಕೆ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಆಸ್ಪತ್ರೆಯ ಸಿಬ್ಬಂದಿ ಹಾಗೂ ಅನಾಮಿಕ ನಾಲ್ವರು ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ.