ಶಬರಿಮಲೆ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವ ಹಕ್ಕು ಸರ್ಕಾರಕ್ಕಿಲ್ಲ: ಕೇರಳ ಹೈಕೋರ್ಟ್

ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರವನ್ನು ತೀವ್ರ ತರಾಟಗೆ ತೆಗೆದುಕೊಂಡ ಹೈಕೋರ್ಟ್...
ಶಬರಿಮಲೆ
ಶಬರಿಮಲೆ
Updated on: 
ಕೊಚ್ಚಿ: ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರವನ್ನು ತೀವ್ರ ತರಾಟಗೆ ತೆಗೆದುಕೊಂಡ ಹೈಕೋರ್ಟ್, ಅಯ್ಯಪ್ಪಸ್ವಾಮಿ ದೇವಸ್ಥಾನದ ದೈನಂದಿನ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುವ ಯಾವುದೇ ಹಕ್ಕು ಸರ್ಕಾರಕ್ಕೆ ಇಲ್ಲ. ಭದ್ರತೆ ನೀಡುವುದಷ್ಟೇ ನಿಮ್ಮ ಕೆಲಸ ಎಂದು ಸೋಮವಾರ ಹೇಳಿದೆ.
ದೇವಸ್ಥಾನದ ದೈನಂದಿನ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡಿನ ರಮೇಶ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಭಕ್ತರು ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಕಷ್ಟಕರವಾಗಿರುವುದಕ್ಕೆ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.
ತಿರುವಂಕೂರು ರಾಜಮನೆತನದ ಕೊನೆಯ ರಾಜ ಚಿತ್ರಾ ತಿರುನಾಲ್ ಬಲರಾಮ ವರ್ಮ ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿಶೇಷ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯ ಇಂದು ಬಾಗಿಲು ತೆರೆದಿದ್ದು, ಇದರ ಬೆನ್ನಲ್ಲೇ ಕೋರ್ಟ್ ಸರ್ಕಾರವನ್ನು ಟೀಕಿಸಿದೆ.
ದೇವಸ್ಥಾನದ ಆಡಳಿತ ಮಂಡಳಿ ಮೇಲೆ ಯಾವುದೇ ಪರಿಸ್ಥಿತಿಯಲ್ಲೂ ಒತ್ತಡ ಹಾಕಬಾರದು ಮತ್ತು ದೈನಂದಿನ ವ್ಯವಹಾರಗಳನಲ್ಲೂ ಹಸ್ತಕ್ಷೇಪ ಮಾಡಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದಷ್ಟೇ ಸರ್ಕಾರದ ಕೆಲಸ ಎಂದು  ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.
ಇದೇ ವೇಳೆ ಶಬರಿಮಲೆ ಪ್ರವೇಶಿಸಲು ಯತ್ನಿಸುವ ಭಕ್ತಗಣಕ್ಕೆ ಯಾವುದೇ ತೊಂದರೆ ನೀಡಬಾರದೆಂದು ರಾಜ್ಯ ಪೊಲೀಸರಿಗೆ ಸೂಚಿಸಿರುವು ಕೋರ್ಟ್, ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com