ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ತಾನು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಮತ್ತು ಅದರ ಸಾಧನೆ ಶೂನ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರ, ಉದ್ಯೋಗ, ಅಭಿವೃದ್ಧಿ, ಜನರ ಖಾತೆಗೆ ಹಣ ಜಮೆ ಮಾಡುವ ಭರವಸೆ ನೀಡಿತ್ತು. ಆ ಯಾವ ಭರವಸೆಯನ್ನು ಈಡೇರಿಸಿದ ಮೋದಿ ಸರ್ಕಾರ ಈಗ ಭವ್ಯ ದೇವಸ್ಥಾನ, ಪ್ರತಿಮೆಗಳ ನಿರ್ಮಾಣದ ಭರವಸೆ ನೀಡುತ್ತಿದೆ ಎಂದು ಚಿದಂಬರಂ ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಅವರು ಇತ್ತೀಚಿಗೆ ಗುಜರಾತ್ ನಲ್ಲಿ ದೇಶದ ಮೊದಲ ಗೃಹಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪ್ರತಿಮೆ ಅನಾವರಣಗೊಳಿಸಿದ ನಂತರ ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣದ ಭರವಸೆ ನೀಡುತ್ತಿರುವುದಕ್ಕೆ ಚಿದಂಬರಂ ಈ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಾವ ಸಾಧನೆಯನ್ನೂ ಮಾಡಿಲ್ಲ. ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಭವ್ಯ ರಾಮ ಮಂದಿರವನ್ನು ನಿರ್ಮಿಸುವ ಮತ್ತು ಜನರಿಗೆ ಆಮಿಷ ಒಡ್ಡುವ, ಭರವಸೆಗಳನ್ನು ನೀಡುವುದರಲ್ಲಿ ತೊಡಗಿದ್ದಾರೆ' ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.