ರಾಜ್ಕೋಟ್: ಅಪ್ರಾಪ್ತ ಬಾಲಕಿ ಮೃತದೇಹ ಪತ್ತೆಯಾಗಿದ್ದು ದೇಹದ ಮೇಲೆ 37 ಕಡೆ ಭೀಕರವಾಗಿ ಚೂರಿ ಇರಿತ ಕಂಡು ಬಂದಿದ್ದು ಸಾಮೂಹಿಕ ಅತ್ಯಾಚಾರದ ಬಳಿಕ ಕಾಮಾಂಧರು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಗುಜರಾತ್ ನ ಗಿರ್-ಸೋಮನಾಥ್ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ದೇಹದ ಮೇಲೆ 37 ಕಡೆ ಚೂರಿ ಇರಿತ ಕಂಡುಬಂದಿದ್ದು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿ ಚೂರಿ ಇರಿದು ಹತ್ಯೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಕೊಡಿನಾರ್ ನ ಕಾರ್ಪೋರೇಟರ್ ನಡೆಸುವ ಶಾಲೆಯೊಂದರಲ್ಲಿ ಬಾಲಕಿ 11ನೇ ತರಗತಿಯಲ್ಲಿ ಓದುತ್ತಿದ್ದಳು. ಬಾಲಕಿಯ ಸ್ನೇಹಿತರೇ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದು ಈ ಸಂಬಂಧ ಇಬ್ಬರು ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪೊಲೀಸರು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ವರದಿ ಬಂದ ನಂತರ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂಬ ಸ್ಪಷ್ಟನೆ ಸಿಗಲಿದೆ ಎಂದು ತಿಳಿಸಿದ್ದಾರೆ.