ಡೆಹ್ರಾಡೂನ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಲಿಕಾಪ್ಟರ್ ನಲ್ಲಿ ಡೆಹ್ರಾಡೂನ್ ಗೆ ಬಂದಿಳಿದಿದ್ದು, ಕೇದಾರನಾಥ್ ನಿಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಿಂದ ಇಂಡಿಯನ್ ಏರ್ ಫೋರ್ಸ್ ನ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ಅವರು ಸ್ವಾಗತಿಸಿದರು.
ಕೇದಾರನಾಥನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದು, 2013 ರಲ್ಲಿ ಉಂಟಾದ ಭಾರೀ ಪ್ರವಾಹ ಸಂಭವಿಸಿ ಸಾವಿರಾರು ಮಂದಿ ಸಾವನ್ನಪ್ಪಿದ್ದರು. ಇದರ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದರ ಪರಿಶೀಲನೆ ನಡೆಸಲಿದ್ದಾರೆ.
ಕೇದಾರನಾಥ್ ನಲ್ಲಿ ನಡೆಯುತ್ತಿರುವ ಪುನರ್ ನಿರ್ಮಾಣ ಕೆಲಸಕ್ಕೆ ಪ್ರಧಾನಿ ಮೋದಿ ವಯಕ್ತಿಕವಾಗಿ ಆಸಕ್ತಿ ತೋರಿದ್ದಾರೆ.ಕಳೆದ ಆರು ತಿಂಗಳಿಂದ ಎರಡು ಬಾರಿ ಇಲ್ಲಿಗೆ ಭೇಟಿ ನೀಡಿದ್ದಾರೆ.