ಮಾಸ್ಕೋದಲ್ಲಿ ತಾಲಿಬಾನ್ ಪ್ರತಿನಿಧಿಗಳೊಂದಿಗೆ ಮಾತುಕತೆ ಇಲ್ಲ: ವಿದೇಶಾಂಗ ಇಲಾಖೆ

ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಯೋಜನೆಯಾಗಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ಇದೇ ವೇಳೆ ತಾಲಿಬಾನಿ ನಾಯಕರ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯನ್ನು ಭಾರತೀಯ ವಿದೇಶಾಂಗ ಇಲಾಖೆ ಸ್ಪಷ್ಟವಾಗಿ ತಳ್ಳಿ ಹಾಕಿದೆ.
ಮಾಸ್ಕೋದಲ್ಲಿ ತಾಲಿಬಾನ್ ಪ್ರತಿನಿಧಿಗಳೊಂದಿಗೆ ಮಾತುಕತೆ ಇಲ್ಲ: ವಿದೇಶಾಂಗ ಇಲಾಖೆ
ಮಾಸ್ಕೋದಲ್ಲಿ ತಾಲಿಬಾನ್ ಪ್ರತಿನಿಧಿಗಳೊಂದಿಗೆ ಮಾತುಕತೆ ಇಲ್ಲ: ವಿದೇಶಾಂಗ ಇಲಾಖೆ
ನವದೆಹಲಿ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಯೋಜನೆಯಾಗಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ಇದೇ ವೇಳೆ ತಾಲಿಬಾನಿ ನಾಯಕರ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯನ್ನು ಭಾರತೀಯ ವಿದೇಶಾಂಗ ಇಲಾಖೆ ಸ್ಪಷ್ಟವಾಗಿ ತಳ್ಳಿ ಹಾಕಿದೆ. 
ಶೃಂಗಸಭೆಯಲ್ಲಿ ಭಾರತ ತಾಲಿಬಾನಿ ನಾಯಕರ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಭಾರತ ಸರ್ಕಾರಕ್ಕೆ ತಾಲಿಬಾನ್ ಜೊತೆ ಮಾತುಕತೆ ನಡೆಸಲು ಸಾಧ್ಯವಾಗುತ್ತದೆ ಆದರೆ ಜಮ್ಮು-ಕಾಶ್ಮೀರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಗಮನ ಹರಿಸುವುದಕ್ಕೆ ಹಾಗೂ ಕಾಶ್ಮೀರಕ್ಕೆ ಸಂಬಂಧಿಸಿದಂತೆ ಅನಧಿಕೃತ ಮಾತುಕತೆ ನಡೆಸುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. 
ಆದರೆ ಈಗ ತಾಲಿಬಾನಿ ನಾಯಕರೊಂದಿಗಿನ ಚರ್ಚೆಯ ಬಗ್ಗೆ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದ್ದು, ಅಫ್ಘಾನಿಸ್ತಾನ ಶಾಂತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಡೆಯುವ ಅನಧಿಕೃತ ಸಭೆಯಲ್ಲಿ ಭಾರತ ಭಾಗಿಯಾಗುತ್ತಿದೆ, ಈ ಪ್ರಕ್ರಿಯೆಯಲ್ಲಿ ತಾಲೀಬಾನ್ ನಾಯಕರೂ ಸಹ ಇರಲಿದ್ದಾರೆ ಅಷ್ಟೇ ಎಂದು ಹೇಳಿದೆ. ಈ ಬಗ್ಗೆ ಸುಷ್ಮಾ ಸ್ವರಾಜ್ ಸಹ ಸ್ಪಷ್ಟನೆ ನೀಡಿದ್ದು ನಮ್ಮ ಉಪಸ್ಥಿತಿ ಅನಧಿಕೃತವಾಗಿರಲಿದೆಯಷ್ಟೇ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com