ಕಾಶ್ಮೀರ: ಪುಲ್ವಾಮಾದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

ಜಮ್ಮು-ಕಾಶ್ಮೀರದ ಪುಲ್ವಾಮದ ಹಳ್ಳಿಯೊಂದರಲ್ಲಿ ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ. ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮದ ಹಳ್ಳಿಯೊಂದರಲ್ಲಿ ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ. 
ಟೆಕ್ಕಿನ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಸೇನಾ ಪಡೆ ಶೋಧ ಕಾರ್ಯದಲ್ಲಿ ತೊಡಗಿದ್ದಾಗ ಉಗ್ರರು ಮೊದಲಿಗೆ ಗುಂಡು ಹಾರಿಸಿದ್ದಾರೆ, ಈ ವೇಳೆ ಸೇನಾ ಪಡೆ ಪ್ರತಿದಾಳಿ ನಡೆಸಿದಾಗಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ, ಆದರೆ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಮಂಗಳವಾರ ಹಿಜ್ಬುಲ್ ಮುಜಾಹಿದ್ದೀನ್ ನ ಇಬ್ಬರು ಉಗ್ರರನ್ನು ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com