ಅಯೋಧ್ಯೆ ಜಿಲ್ಲೆಯಲ್ಲಿ ಮಾಂಸ, ಮದ್ಯ ಮಾರಾಟ ನಿಷೇಧಕ್ಕೆ ಶ್ರೀಗಳ ಆಗ್ರಹ

ಅಯೋಧ್ಯೆ ಜಿಲ್ಲೆಯಲ್ಲಿ ಮಾಂಸ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಬೇಕು ಎಂದು ದೇವಸ್ಥಾನಗಳ ನಗರಿಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಲಖನೌ: ಅಯೋಧ್ಯೆ ಜಿಲ್ಲೆಯಲ್ಲಿ ಮಾಂಸ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಬೇಕು ಎಂದು ದೇವಸ್ಥಾನಗಳ ನಗರಿಯ ಶ್ರೀಗಳು ಉತ್ತರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಳೆದ ಶನಿವಾರ ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ, ಜಿಲ್ಲೆಯಾದ್ಯಂತ ಮಾಂಸ ಹಾಗೂ ಮದ್ಯ ಮಾರಾಟ ನಿಷೇಧಿಸಬೇಕು ಎಂದು ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಸೇರಿದಂತೆ ಹಲವು ಶ್ರೀಗಳು ಆಗ್ರಹಿಸಿದ್ದಾರೆ.
ಈಗಾಗಲೇ ಅಯೋಧ್ಯೆಯಲ್ಲಿ ಮಾಂಸ ಹಾಗೂ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಅದನ್ನು ಜಿಲ್ಲೆಯಾದ್ಯಂತ ವಿಸ್ತರಿಸಬೇಕು ಎಂಬುದು ಶ್ರೀಗಳ ಒತ್ತಾಯ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸಚಿವ ಶ್ರೀಕಾಂತ್ ಶರ್ಮಾ ಅವರು, ಅಯೋಧ್ಯೆ ಜನರ ಭಾವನೆಗಳನ್ನು ನಾವು ಗೌರವಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com