ಟಿಡಿಪಿ ಜೊತೆ ಮೈತ್ರಿ, ಕಾಂಗ್ರೆಸ್ ನಿರ್ಧಾರಕ್ಕೆ ಚಿರಂಜೀವಿ ಅಸಮಾಧಾನ, ಪಕ್ಷ ತೊರೆಯಲು ಚಿಂತನೆ?

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೆಲುಗುದೇಶಂ ಜತೆ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದನ್ನು ವಿರೋಧಿಸಿ ನಟ ಹಾಗೂ ಮಾಜಿ ಕೇಂದ್ರ ಸಚಿವ ಚಿರಂಜೀವಿ,ಕಾಂಗ್ರೆಸ್ ಪಕ್ಷ ತೊರೆಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹೈದರಾಬಾದ್: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೆಲುಗುದೇಶಂ ಜತೆ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದನ್ನು ವಿರೋಧಿಸಿ ನಟ ಹಾಗೂ ಮಾಜಿ ಕೇಂದ್ರ ಸಚಿವ ಚಿರಂಜೀವಿ,ಕಾಂಗ್ರೆಸ್ ಪಕ್ಷ ತೊರೆಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಆಂಧ್ರ ಪ್ರದೇಶ ಮತ್ತು ತೆಲಂಗಾಣ ವಿಧಾನಸಭೆ ನಿಮಿತ್ತ ಇತ್ತೀಚೆಗಷ್ಟೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಹಾಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಅವರೊಂದಿಗೆ ಕೈಜೋಡಿಸಿದ್ದರು. ನವೆಂಬರ್ 1ರಂದು ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, 2019ರ ಲೋಕಸಭಾ ಚುನಾವಣೆ ಮತ್ತು ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಉಭಯ ಪಕ್ಷಗಳು ಜತೆಯಾಗಿ ಕಾರ್ಯ ನಿರ್ವಹಿಸಲಿವೆ ಎಂದು ಪ್ರಕಟಿಸಿದ್ದರು.
ಕಾಂಗ್ರೆಸ್ ಪಕ್ಷದ ನಿರ್ಧಾರದಿಂದ ಚಿರಂಜೀವಿ ತೀವ್ರ ಅಸಮಾಧನಗೊಂಡಿದ್ದು, ಪಕ್ಷಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. 'ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಬಗ್ಗೆ ಚಿರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಬೇಕಿದ್ದು, ಒಂದೆರಡು ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದು ಮೂಲಗಳು ಹೇಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com