ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅಯೋಧ್ಯೆ ರಾಮ ಮಂದಿರ ವಿವಾದ: ತುರ್ತು ಅರ್ಜಿ ಪರಿಶೀಲನೆಗೆ ಸುಪ್ರೀಂ ನಕಾರ

ಅಯೋಧ್ಯೆ ರಾಮ ಮಂದಿರ ವಿವಾದ ಸಂಬಂಧ ಸಲ್ಲಿಸಲಾಗಿರುವ ಅರ್ಜಿಗಳನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ...
ನವದೆಹಲಿ: ಅಯೋಧ್ಯೆ ರಾಮ ಮಂದಿರ ವಿವಾದ ಸಂಬಂಧ ಸಲ್ಲಿಸಲಾಗಿರುವ ಅರ್ಜಿಗಳನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ. 
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾಯಮೂರ್ತಿ ಎಸ್.ಕೆ. ಕೌಲ್ ಅವರಿದ್ದ ಪೀಠ ತುರ್ತು ಅರ್ಜಿ ಪರಿಶೀಲನೆ ನಡೆಸಲು ತಿರಸ್ಕರಿಸಿದೆ. 
ಅಯೋಧ್ಯೆ ವಿವಾದ ಸಂಬಂಧ ಈಗಾಗಲೇ ನಾವು ತೀರ್ಪು ನೀಡಿದ್ದೇವೆ. ಮುಂದಿನ ಜನವರಿ ತಿಂಗಳಿನಲ್ಲಿ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿರುವ ನ್ಯಾಯಪೀಠ, ತುರ್ತು ಅರ್ಜಿ ಪರಿಶೀಲನೆ ನಡೆಸಲು ತಿರಸ್ಕರಿಸಿದೆ. 
2010ರಲ್ಲಿ ಅಲಹಾಬಾದ್ ಹೈಕೋರ್ಟ್ ರಾಮ ಜನ್ಮಭೂಮಿಯನ್ನು 3 ಭಾಗಗಳಾಗಿ ಹಂಚಿತ್ತು. ಇದನ್ನು ಪ್ರಶ್ನಿಸಿ ವಿವಿಧ ವರ್ಗಗಳ ಕಕ್ಷಿದಾರರು ಈ ಹಿಂದೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಗಳನ್ನು ಅ.29 ರಂದು ಕೈಗೆತ್ತಿಕೊಂಡಿದ್ದ ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗೋಯ್, ನ್ಯಾ.ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾ.ಕೆ.ಎಂ ಜೋಸೆಫ್ ಅವರ ತ್ರಿಸದಸ್ಯ ಪೀಠ, 2019ರ ಜನವರಿ ತಿಂಗಳಿಗೆ ವಿಚಾರಣೆ ಮುಂದೂಡಿತ್ತು. 

Related Stories

No stories found.

Advertisement

X
Kannada Prabha
www.kannadaprabha.com