2002 ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನ.19ಕ್ಕೆ

2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಎಸ್ ಐಟಿ ಕ್ಲೀನ್ ಚಿಟ್ ಕೊಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ.19 ರಂದು ನಡೆಸಲಿದೆ.
PM Narendra Modi
PM Narendra Modi
ನವದೆಹಲಿ: 2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಎಸ್ ಐಟಿ ಕ್ಲೀನ್ ಚಿಟ್ ಕೊಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ.19 ರಂದು ನಡೆಸಲಿದೆ. 
ಕಾಂಗ್ರೆಸ್ ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಪತ್ನಿ ಜಾಕಿಯಾ ಜಾಫ್ರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಸ್ ಐಟಿ ಕೊಟ್ಟಿರುವ ಕ್ಲೀನ್ ಚಿಟ್ ನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಎಸ್ ಐಟಿ ಕ್ಲೀನ್ ಚಿಟ್ ನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿರುವ ಸುಪ್ರೀಂ ಕೋರ್ಟ್ ನ.19 ರಂದು ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ. 
 ಪ್ರಧಾನಿ ಮೋದಿಗೆ ನೀಡಲಾಗಿದ್ದ ಕ್ಲೀನ್ ಚಿಟ್ ನ್ನು ಎತ್ತಿ ಹಿಡಿದಿದ್ದ ಕಳೆದ ವರ್ಷ ಗುಜರಾತ್ ಹೈಕೋರ್ಟ್, ಜಾಕಿಯಾ ಜಾಫ್ರಿ ಅರ್ಜಿಯನ್ನು ತಿರಸ್ಕರಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com