ಶಬರಿಮಲೆ ವಿವಾದ: ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆ ಮಧ್ಯಾಹ್ನ 3ಕ್ಕೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ನೀಡಿರುವ ತೀರ್ಪು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ನೀಡಿರುವ ತೀರ್ಪು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. 
ಮಹಿಳೆಯರ ಪ್ರವೇಶಕ್ಕೆ ನಿರಾಕರಿಸಿದ್ದ ದೇಗುಲದ ನಿಲುವಿನ ವಿರುದ್ಧ ಈ ಹಿಂದೆ ಸುಪ್ರೀಂಕೋರ್ಟ್ ಕಿಡಿಕಾರಿತ್ತು. ಈ ಸಂಬಂಧ ಸೆ.28 ರಂದು ತೀರ್ಪು ನೀಡಿತ್ತು. 
ದೇವಾಲಯ ಸ್ಥಾಪಿಸಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಿದ ಬಳಿಕ ಪ್ರವೇಶಕ್ಕೆ ಸಂಬಂಧಿಸಿದಂತೆ ಯಾರ ಮೇಲೆಯೂ ನಿರ್ಬಂಧ ಹೇರುವಂತಿಲ್ಲ ಎಂದು ಹೇಳಿತ್ತು. ಸುಪ್ರೀಂಕೋರ್ಟ್ ನ ಈ ತೀರ್ಪಿಗೆ ಕೇರಳ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ ಹಾಗೂ ಹಿಂಸಾಚಾರ ಸೃಷ್ಟಿಯಾಗಿತ್ತು. 
ಸುಪ್ರೀಂಕೋರ್ಟ್ ತೀರ್ಪು ಆಕ್ಷೇಪಿಸಿ ಈವರೆಗೂ 48 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ವಿಚಾರಣೆಯನ್ನು ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗೋಯಿ ಹಾಗೂ ನ್ಯಾಯಾಮೂರ್ತಿಗಳಾದ ಆರ್.ಎಫ್. ನಾರೀಮನ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಮತ್ತು ಇಂದು ಮಲ್ಹೋತ್ರ ಅವರ ಪೀಠ ವಿಚಾರಣೆ ನಡೆಸಲಿದೆ. ಪ್ರಸ್ತುತ ಸಲ್ಲಿಕೆಯಾಗಿರುವ ಮರು ಪರಿಶೀಲನಾ ಅರ್ಜಿಗಳ ವಿಚಾರಣೆ ಬಳಿವಷ್ಟೇ ನಂತರ ಸಲ್ಲಿಕೆಯಾಗಿರುವ ಹೊಸ ಅರ್ಜಿಗಳ ವಿಚಾರಣೆ ನಡೆಸಲಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com