ಜಮ್ಮು-ಕಾಶ್ಮೀರ: ಇಬ್ಬರು ಉಗ್ರರ ಹತ್ಯೆ, ಒಳನುಸುಳುವಿಕೆ ಸಂಚು ವಿಫಲಗೊಳಿಸಿದ ಸೇನೆ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರನ್ ವಲಯದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಇಂದು ಅಕ್ರಮವಾಗಿ ಒಳನುಸುಳುತ್ತಿದ್ದ ಇಬ್ಬರು ಅಪರಿಚಿತ ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on: 

ಕುಪ್ವಾರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರನ್ ವಲಯದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಇಂದು  ಅಕ್ರಮವಾಗಿ ಒಳನುಸುಳುತ್ತಿದ್ದ ಇಬ್ಬರು ಅಪರಿಚಿತ ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.

 ಕೇರಾನ್ ವಲಯದಲ್ಲಿನ ಸೈನಿಕರ ಮುಂಜಾಗ್ರತೆಯಿಂದ  ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ  ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ . ಕಾರ್ಯಾಚರಣೆ ಇನ್ನೂ ಮುಂದುವರೆದಿದೆ .ಗುಂಡಿಗೆ ಬಲಿಯಾದ ಉಗ್ರರ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com