ನವದೆಹಲಿ: ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿದ್ದ ಎರಡು ಖಾತೆಗಳ ಜವಾಬ್ದಾರಿಯನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಸದಾನಂದ ಗೌಡರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಯನ್ನು ನೀಡಲಾಗಿದ್ದರೆ, ನರೇಂದ್ರ ಸಿಂಗ್ ತೋಮರ್ ಅವರಿಗೆ ಸಂಸದೀಯ ವ್ಯವಹಾರಗಳ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.