ಮುಂಬೈ: ಪುನರ್ವಸತಿ ಪ್ರಾಧಿಕಾರದ ಕಟ್ಟಡದಲ್ಲಿ ಅಗ್ನಿ ಅವಘಡ, ಇಬ್ಬರು ಸಾವು

ಮುಂಬೈನ ಕೊಳಗೇರಿ ಪುನರ್ವಸತಿ ಪ್ರಾಧಿಕಾರ(ಎಸ್ ಆರ್ ಎ)ದ ಕಟ್ಟಡದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಮುಂಬೈ: ಮುಂಬೈನ ಕೊಳಗೇರಿ ಪುನರ್ವಸತಿ ಪ್ರಾಧಿಕಾರ(ಎಸ್ ಆರ್ ಎ)ದ ಕಟ್ಟಡದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಇಂದು ರಾತ್ರಿ 8.30ರ ಸುಮಾರಿಗೆ ಅಂದೇರಿ ಪಶ್ಚಿಮದ ಓಬೆರಾಯ್ ಟವರ್ ಬಳಿ ಇರುವ ಕದಂ ಚಾವ್ಲಾ ಎಸ್ ಆರ್ ಎ ಕಟ್ಟಡದ 10 ಮತ್ತು 11ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೆ ಕಟ್ಟಡದಿಂದ ಮೂವರನ್ನು ರಕ್ಷಿಸಲಾಗಿದೆ ಎಂದು ಬಿಎಂಸಿಯ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಇತರೆ ಮಹಡಿಗಳಲ್ಲಿರುವ ಜನರನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com