ಅಂಕಿವ್ ಬೈಸೊಯಾ
ದೇಶ
ನಕಲಿ ಪದವಿ: ದೆಹಲಿ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷನನ್ನು ಅಮಾನತುಗೊಳಿಸಿದ ಎಬಿವಿಪಿ
ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ), ನಕಲಿ ಪದವಿ ಪ್ರಮಾಣಪತ್ರ ಸಲ್ಲಿಸಿದ ಆರೋಪ ಎದುರಿಸುತ್ತಿರುವ ದೆಹಲಿ....
ನವದೆಹಲಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ), ನಕಲಿ ಪದವಿ ಪ್ರಮಾಣಪತ್ರ ಸಲ್ಲಿಸಿದ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಂಕಿವ್ ಬೈಸೊಯಾ ಅವರನ್ನು ಅಮಾನತುಗೊಳಿಸಿದೆ.
ಬೈಸೊಯಾ ಅವರು ದೆಹಲಿ ವಿವಿಯಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ನಕಲಿ ಪದವಿ ಪತ್ರಗಳನ್ನು ನೀಡಿದ್ದಾರೆ ಎಂದು ತಿರುವಲ್ಲೂವರ್ ವಿಶ್ವವಿದ್ಯಾಲಯ ವರದಿ ನೀಡಿರುವುದರಿಂದ ಅವರು ವಿಚಾರಣೆ ಎದುರಿಸಬೇಕಾಗಿದೆ. ಇದರಿಂದ ಮುಜುಗರಕ್ಕೆ ಒಳಗಾಗಿರುವ ಎಬಿವಿಪಿ ವಿಚಾರಣೆ ಮುಗಿಯುವರೆಗೆ ಬೈಸೊಯಾ ಅವರ ಸದಸ್ಯತ್ವವನ್ನು ಅಮಾನತುಗೊಳಿಸಿದೆ ಮತ್ತು ತಕ್ಷಣ ದೆಹಲಿ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನ ತೊರೆಯುವಂತೆ ಎಬಿವಿಪಿ ಸೂಚಿಸಿದೆ.
ದೆಹಲಿ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಂಕಿವ್ ಬೈಸೊಯಾಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಮತ್ತು ವಿಚಾರಣೆ ಮುಗಿಯುವವರೆಗೆ ಅವರನ್ನು ಸಂಘಟನೆಯ ಪ್ರಮುಖ ಜವಾಬ್ದಾರಿಗಳಿಂದ ದೂರ ಇರುವಂತೆಯೂ ಸೂಚಿಸಲಾಗಿದೆ ಎಂದು ಎಬಿವಿಪಿ ವಕ್ತಾರೆ ಮೊನಿಕಾ ಚೌಧರಿ ಅವರು ಹೇಳಿದ್ದಾರೆ.
ಬೈಸೊಯಾ ವಿರುದ್ಧದ ತನಿಖೆಯನ್ನು ಆದಷ್ಟು ಬೇಗ ಮುಗಿಸುವಂತೆ ಎಬಿವಿಪಿ ದೆಹಲಿ ವಿವಿಗೆ ಒತ್ತಾಯಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ