ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿ ದೊಡ್ಡ ಹಗರಣ - ಖರ್ಗೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ರಾಫೆಲ್ ಯುದ್ದ ವಿಮಾನ ಖರೀದಿ ಪ್ರಕ್ರಿಯೆಯನ್ನು ತಿರುಚಿದೆ ಎಂದು ಆರೋಪಿಸಿರುವ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ ಎಂದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ರಾಫೆಲ್ ಯುದ್ದ ವಿಮಾನ ಖರೀದಿ ಪ್ರಕ್ರಿಯೆಯನ್ನು ತಿರುಚಿದೆ ಎಂದು ಆರೋಪಿಸಿರುವ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ ಎಂದಿದ್ದಾರೆ.

ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಖರ್ಗೆ, ಎಲ್ಲಾ ದುಡ್ಡು ನೇರವಾಗಿ  ಉದ್ಯಮಿಯೊಬ್ಬರ ಜೇಬು ಸೇರಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು, ಪ್ರತಿಪಕ್ಷಗಳ ಜೊತೆ ಸೇರಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ರಾಫೆಲ್ ಒಪ್ಪಂದ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ,  ಇಂತಹ ಖರೀದಿ ಪ್ರಕ್ರಿಯೆ ದೇಶದಲ್ಲಿಯೇ ನಡೆದಿಲ್ಲ.ಫ್ರಾನ್ಸ್ ಸರ್ಕಾರ   ನೇರವಾಗಿ ಗುತ್ತಿಗೆ ವ್ಯವಹಾರ ನಡೆಸಿಲ್ಲ. ಅಡ್ಡ ಮಾರ್ಗವಾಗಿ ಖರೀದಿ ಪ್ರಕ್ರಿಯೆ ನಡೆಸಿದೆ ಎಂದು ಆರೋಪಿಸಿದರು.

ಈ ಸಂಬಂಧ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿರುವ ಅರ್ಜಿಗಳ  ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ಆರಂಭಿಸಿದ್ದು, ಸುರಕ್ಷತೆ ಹಾಗೂ ಭದ್ರತೆ ಕಾರಣದಿಂದ ವಿಮಾನಗಳ ಖರೀದಿ ಬೆಲೆಯನ್ನು ಬಹಿರಂಗಪಡಿಸಲು ಕೇಂದ್ರಸರ್ಕಾರ ನಿರಾಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com