ಸಿಬಿಐ ತನಿಖೆಗೆ ತಡೆ: ನಾಯ್ಡು ಬೆಂಬಲಕ್ಕೆ ನಿಂತ ಕೇಜ್ರಿವಾಲ್, ಐಟಿ ನಿಷೇಧಕ್ಕೆ ಸಲಹೆ

ರಾಜ್ಯದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು...
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
Updated on: 
ನವದೆಹಲಿ: ರಾಜ್ಯದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಿರ್ಧಾರವನ್ನು ಬೆಂಬಲಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಆದಾಯ ತೆರಿಗೆ ಇಲಾಖೆ ದಾಳಿಯನ್ನೂ ನಿಷೇಧಿಸಬೇಕು ಎಂದು ಸಲಹೆ ನೀಡಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದ್ದಾರೆ. ಕೇಂದ್ರ ಮೋದಿ ಸರ್ಕಾರ ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ನೋಟು ಅಮಾನ್ಯೀಕರಣ ಹಗರಣ, ವಿಜಯ್ ಮಲ್ಯ ವಂಚನೆ, ರಾಫೆಲ್ ಡೀಲ್ ಹಾಗೂ ಸಹರಾ ಹಗರಣಗಳ ಬಗ್ಗೆ ಏಕೆ ಸಿಬಿಐ ತನಿಖೆ ನಡೆಸುತ್ತಿಲ್ಲ? ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಗೂ ಅನುಮತಿ ನೀಡಬೇಡಿ ಎಂದು ಆಂಧ್ರ ಸಿಎಂಗೆ ದೆಹಲಿ ಸಿಎಂ ಸಲಹೆ ನೀಡಿದ್ದಾರೆ.
ಇನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಆಂಧ್ರ ಸಿಎಂ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
'ದೆಹಲಿ ವಿಶೇಷ ಪೊಲೀಸ್ ಸಂಸ್ಥೆಯ 1946ರ ಕಾಯ್ದೆಯ ಅಧಿಕಾರದಂತೆ, ದೆಹಲಿ ವಿಶೇಷ ಪೊಲೀಸ್ ಸಂಸ್ಥೆಯ ಎಲ್ಲ ಸದಸ್ಯರಿಗೆ ನೀಡಲಾಗಿದ್ದ ಅನುಮತಿಯನ್ನು ಆಂಧ್ರ ಪ್ರದೇಶ ಸರ್ಕಾರ ಹಿಂತೆಗೆದುಕೊಂಡಿದೆ. ಇದರಿಂದಾಗಿ ಕಾಯ್ದೆಯ ನಿಯಮಗಳಂತೆ ಅಧಿಕಾರ ಹಾಗೂ ಅಧಿಕಾರದ ವ್ಯಾಪ್ತಿಯನ್ನು ತೆಗೆದುಹಾಕಲಾಗಿದೆ' ಎಂದು ಚಂದ್ರಬಾಬು ನಾಯ್ಡು ಸರ್ಕಾರ ಆದೇಶ ಹೊರಡಿಸಿದೆ. 
ಆಗಸ್ಟ್ 3, 2018ರಂದು ಸಿಬಿಐ ಸೇರಿ ದೆಹಲಿ ವಿಶೇಷ ಪೊಲೀಸ್ ಸಂಸ್ಥೆಯ ಎಲ್ಲ ಸದಸ್ಯರಿಗೆ ಆಂಧ್ರ ಪ್ರದೇಶ ಸರ್ಕಾರ ರಾಜ್ಯದಲ್ಲಿ ತನಿಖೆಗೆ ಅನುಮತಿ ನೀಡಿತ್ತು. ಭ್ರಷ್ಟಾಚಾರ ತಡೆ ಕಾಯ್ದೆ ಸೇರಿ ಹಲವು ಕಾನೂನಿಗಳಿಗೆ ಅನ್ವಯವಾಗುವಂತೆ ಕೇಂದ್ರ ಸರ್ಕಾರದ ಅಧಿಕಾರಿಗಳು, ಕೇಂದ್ರ ಸರ್ಕಾರಿ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿತ್ತು. ಸಿಬಿಐ ಕೂಡ ದೆಹಲಿ ವಿಶೇಷ ಪೊಲೀಸ್ ಸಂಸ್ಥೆಗೇ ಸೇರುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com