ಪ್ರಧಾನಿ ಕುರಿತ ಹೇಳಿಕೆ: ಶಶಿ ತರೂರ್ ವಿರುದ್ಧದ ಮಾನನಷ್ಟ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ ಶಿವನ ಲಿಂಗನ ಬಳಿ ಇರುವ ಚೇಳು ಎಂಬ ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿಕೆ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಕೈಗೆತ್ತಿಕೊಂಡಿದೆ.
ಶಶಿ ತರೂರ್
ಶಶಿ ತರೂರ್

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಶಿವನ ಲಿಂಗನ ಬಳಿ ಇರುವ ಚೇಳು ಎಂಬ ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿಕೆ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು  ದೆಹಲಿ ನ್ಯಾಯಾಲಯ ಕೈಗೆತ್ತಿಕೊಂಡಿದೆ.

ಈ ಸಂಬಂಧ ದೆಹಲಿ ಬಿಜೆಪಿ ಮುಖಂಡ ರಾಜೀವ್ ಬಬ್ಬರ್  ದಾಖಲಿಸಿರುವ  ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ  ಎಸಿಎಂಎಂ ನ್ಯಾಯಾಧೀಶ ಸಮರ್ ವಿಶಾಲ್ , ಅರ್ಜಿದಾರರ ಹೇಳಿಕೆ ದಾಖಲಿಸಲು ಡಿಸೆಂಬರ್ 22ನ್ನು ನಿಗದಿಪಡಿಸಿದ್ದಾರೆ.

ಶಶಿ ತರೂರ್ ಹಿಂದೂ ದೇವರುಗಳನ್ನು ನಿಂದಿಸಿರುವುದು ಮಾತ್ರವಲ್ಲದೇ ಅಪಮಾನ ಕೂಡ ಮಾಡಿದ್ದಾರೆ .ತರೂರ್ ಹೇಳಿಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ಜನರ ನಂಬಿಕೆಯನ್ನು ಘಾಸಿಗೊಳಿಸಿದೆ ಎಂದು ಎಂದು  ದೆಹಲಿ ಬಿಜೆಪಿ ಉಪಾಧ್ಯಕ್ಷ ರಾಜ್ ಬಬ್ಬರ್ ದೂರಿನಲ್ಲಿ ಆರೋಪಿಸಿದ್ದರು.

ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಸಾಹಿತ್ಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಶಶಿ ತರೂರ್,  ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಲಿಂಗ ಬಳಿ ಇರುವ  ಚೇಳು ಎಂದು ಹೇಳಿಕೆ ನೀಡಿದ್ದರು.
ಐಪಿಸಿ ಸೆಕ್ಷನ್ 499 ಹಾಗೂ 500 ರ ಅಡಿಯಲ್ಲಿ ಶಶಿ ತರೂರ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು. ಒಂದು ವೇಳೆ ಶಶಿ ತರೂರ್ ತಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದರೆ ತರೂರ್ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com