ಪುಲ್ವಾಮಾ ಜಿಲ್ಲೆಯ ಕಿಲೋರ ಪ್ರದೇಶದಲ್ಲಿ ಶವವನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ರಾತ್ರಿ ವೇಳೆ ನದೀಂ ಎಂಬಾತನನ್ನು ಅಹರಿಸಿದ ಉಗ್ರರು ಬಳಿಕ ಹತ್ಯೆಗೈಯ್ಯುವ ಮೂಲಕ ಕ್ರೌರ್ಯ ಮೆರೆದಿದ್ದಾರೆ. ಪೊಲೀಸರು ಸ್ಥಳದಲ್ಲೇ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.