ಬಹುಮತ ಸಾಬೀತಿಗೆ ವಿಶೇಷ ಅಧಿವೇಶನ ಕರೆಯಿರಿ: ಗೋವಾ ರಾಜ್ಯಪಾಲರಿಗೆ ಕಾಂಗ್ರೆಸ್

ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಬಹುಮತ ಸಾಬೀತು ಪಡಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯುವಂತೆ ಗೋವಾ ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ...
ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ
ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ
ಪಣಜಿ: ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಬಹುಮತ ಸಾಬೀತು ಪಡಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯುವಂತೆ ಗೋವಾ ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ.
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ವೈದ್ಯಕೀಯ ಕಾರಣದಿಂದಾಗಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಚೇರಿಗೆ ಗೈರು ಹಾಜರಾಗಿದ್ದಾರೆ. ಹೀಗಾಗಿ ಸರ್ಕಾರ ಅಸ್ತವ್ಯಸ್ತಗೊಂಡಿದೆ ಎಂದು ಹೇಳಿದ್ದಾರೆ. 
ಸಂಸತ್ತಿನಲ್ಲಿ ಮುಂಬರುವ ಚಳಿಗಾಲ ಅಧಿವೇಶನದ ವೇಳೆ ಪಕ್ಷ ಈ ವಿಚಾರವನ್ನು ಪ್ರಸ್ತಾಪ ಮಾಡಲಿದೆ. ಗೋವಾ ಸರ್ಕಾರ ಅಸ್ತವ್ಯವಸ್ತಗೊಂಡಿರುವ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೋಗೂ ಗೋವಾ ರಾಜ್ಯಪಾಲರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ವಿಶೇಷ ಅಧಿವೇಶನ ಕರೆದು ಆಡಳಿತಾರೂಢ ಪಕ್ಷ ಬಹುಮತ ಸಾಬೀತುಪಡಿಸುವಂತೆ ಸೂಚಿಸುವಂತೆ ರಾಜ್ಯಪಾಲರ ಬಳಿಯೂ ಮನವಿ ಮಾಡಿಕೊಂಡಿದ್ದೇವೆಂದು ತಿಳಿಸಿದ್ದಾರೆ. 
ಚಳಿಗಾಲ ಅಧಿವೇಶನದ ವೇಳೆ ಬಿಜೆಪಿ ನೇತೃತ್ವದ ಕೇಂದ್ರೀಯ ನಾಯಕತ್ವದ ಮೇಲೆ ಒತ್ತಡ ಹೇರುತ್ತೇವೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಗೋವಾ ಸಂವಿಧಾನವನ್ನು ಬಂಧನಕ್ಕೊಳಪಡಿಸಿದೆ. ಸಿಎಂ ಪರಿಕ್ಕರ್ ಅವರ ಅನುಪಸ್ಥಿತಿಯಲ್ಲಿ ಬಿಜೆಪಿ ಸಂಪುಟ ಸಲಹಾ ಸಮಿತಿಯನ್ನು ರಚನೆ ಮಾಡಿರುವುದು ಸಂವಿಧಾನಕ್ಕೆ ಮಾಡಿರುವ ದೊಡ್ಡ ವಂಚನೆಯಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com