'ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿದೆ. ಆದರೆ, ಈ ಪ್ರಕರಣಗಳ ಪೈಕಿ ಬಹುತೇಕ ಪ್ರಕರಣಗಳಲ್ಲಿ ದೌರ್ಜನ್ಯ ನಡೆದಿರುವುದಿಲ್ಲ. ಅವುಗಳಲ್ಲಿ ಅನೇಕವು ಸುಳ್ಳು ಪ್ರಕರಣಗಳಾಗಿರುತ್ತವೆ. ಉದ್ದೇಶ ಪೂರ್ವಕವಾಗಿ ಮಹಿಳೆಯರು ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ. ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳು ಬಹುತೇಕ ಒಪ್ಪಿತ ಸಂಬಂಧಗಳೆ ಆಗಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರು ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ಧಾರೆ. ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಿಲ್ಲ. ಆದರೆ ತಮ್ಮ ಸಂಗಾತಿಯನ್ನು ವಾಪಸ್ ಪಡೆಯಲು ಅಥವಾ ಆತನೊಂದಿಗೆ ಜಗಳವಾದಗ ಮಹಿಳೆಯರು ಸುಳ್ಳು ಅತ್ಯಾಚಾರ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.