ಶ್ರೀ ಕ್ಷೀರ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ವರ ಪ್ರಸಾದ್ ಅವರು ಇಂದು ಬೆಳಗಿನ ಜಾವ ಕಾರ್ತಿಕ ಸೋಮವಾರದ ಪೂಜೆ ಮಾಡುತ್ತಿದ್ದಾಗ ಹೃದಾಯಾಘಾತದಿಂದ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ದಾರಿ ಮಧ್ಯೆಯೇ ಅರ್ಚಕರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.