ಸಿಖ್‌ ವಿರೋಧಿ ದಂಗೆ: ಯಶಪಾಲ್ ಸಿಂಗ್ ಗೆ ಗಲ್ಲು, ನರೇಶ್‌ ಶೇರಾವತ್‌ಗೆ ಜೀವಾವಧಿ ಶಿಕ್ಷೆ

1984ರಲ್ಲಿ ನಡೆದ ಸಿಖ್‌ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಟ್ಟ ಮೊದಲ ತೀರ್ಪು ಹೊರಬಿದ್ದಿದ್ದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: 1984ರಲ್ಲಿ ನಡೆದ ಸಿಖ್‌ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಟ್ಟ ಮೊದಲ ತೀರ್ಪು ಹೊರಬಿದ್ದಿದ್ದು, ದೆಹಲಿ ಕೋರ್ಟ್ ಮಂಗಳವಾರ ಇಬ್ಬರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿದೆ.
ಸಿಖ್ ದಂಗೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸದಂತೆ ಯಶಪಾಲ್‌ ಸಿಂಗ್ ಗೆ ಗಲ್ಲು ಶಿಕ್ಷೆ ಹಾಗೂ ನರೇಶ್‌ ಶೇರಾವತ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. 
ಯಶಪಾಲ್‌ ಸಿಂಗ್ ಹಾಗೂ ನರೇಶ್‌ ಶೇರಾವತ್‌ ದೆಹಲಿಯ ಮಹಿಪಾಲಪುರದಲ್ಲಿ ಇಬ್ಬರು ಸಿಖ್‌ ಯುವಕರ ಮೇಲೆ ಹಲ್ಲೆ ನಡೆಸಿದ್ದರು. ನಂತರ ನವೆಂಬರ್‌ 1, 1984ರಂದು ಇಬ್ಬರೂ ಮೃತಪಟ್ಟಿದ್ದರು. ಹರದೇವ್‌ ಸಿಂಗ್‌ ಹಾಗೂ ಅವತಾರ್‌ ಸಿಂಗ್‌ ಮೃತ ದುರ್ದೈವಿಗಳು. 
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಜಯ್ ಪಾಂಡೆ ಅವರು ಓರ್ವ ಅಪರಾಧಿಗೆ ಗಲ್ಲು ಶಿಕ್ಷೆ ಹಾಗೂ ಮತ್ತೊಬ್ಬ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು 1994ರಲ್ಲಿ ಪ್ರಕರಣವನ್ನು ಮುಚ್ಚಿಹಾಕಿದ್ದರು. ಆದರೆ ಕೇಂದ್ರ ಗೃಹ ಸಚಿವಾಲಯ 2015ರಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ, ಎಸ್ ಐಟಿ ತನಿಖೆಗೆ ಆದೇಶಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com