ದೆಹಲಿ: ಅರವಿಂದ ಕೇಜ್ರಿವಾಲ್ ಮೇಲೆ ಖಾರದ ಪುಡಿ ಎಸೆತ, ಶಂಕಿತ ಬಂಧನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಖಾರದ ಪುಡಿ ಎಸೆದಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ  ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ  ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಖಾರದ ಪುಡಿ ಎಸೆದಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. 

ಅರವಿಂದ ಕೇಜ್ರಿವಾಲ್ ಊಟಕ್ಕೆಂದು ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ  ಸಚಿವಾಲಯದಿಂದ ಬರುವಾಗ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಕೇಜ್ರಿವಾಲ್ ಬಳಿ ಬಂದು ಕಣ್ಣಿಗೆ ಖಾರದ ಪುಡಿ ಎಸೆದಿದ್ದಾನೆ. ಖಾರದ ಪುಡಿ ಎಸೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com