ಮಹಾರಾಷ್ಟ್ರದ ಪುಲ್ ಗಾಂವ್ ಸೇನಾ ಡಿಪೋದಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಶಸ್ತ್ರಾಸ್ತ್ರ ನಿರ್ಮಾಣ ಕಾರ್ಖಾನೆಯ ಉದ್ಯೋಗಿ ಹಾಗೂ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಪೈಕಿ ನಾಲ್ಕು ಮಂದಿ ಸ್ಫೋಟ ಸಂಭವಿಸಿದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಂತೆಯೇ ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.