ರಾಜೀನಾಮೆಗೆ ಒತ್ತಾಯಿಸಿ ಪರಿಕ್ಕರ್ ನಿವಾಸಕ್ಕೆ ಕಾಂಗ್ರೆಸ್ ನೇತೃತ್ವದಲ್ಲಿಪ್ರತಿಭಟನಾ ಮೆರವಣಿಗೆ

ಕಾಂಗ್ರೆಸ್ ನಾಯಕರೂ ಸೇರಿದಂತೆ ನೂರಾರು ಜನರು ಗೋವಾ ಸಿಎಂ ಮನೋಹರ್ ಪರಿಕ್ಕರ್ ಖಾಸಗಿ ನಿವಾಸದೆಡೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡು ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಪಣಜಿ: ಕಾಂಗ್ರೆಸ್ ನಾಯಕರೂ ಸೇರಿದಂತೆ ನೂರಾರು ಜನರು ಗೋವಾ ಸಿಎಂ ಮನೋಹರ್ ಪರಿಕ್ಕರ್ ಖಾಸಗಿ ನಿವಾಸದೆಡೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡು ರಾಜೀನಾಮೆ ನೀಡುವಂತೆ ಆಗ್ರಹಿಸಿದರು. 
ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿರುವ ಮನೋಹರ್ ಪರಿಕ್ಕರ್ ಅವರು ಗೋವಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.  ಆಡಳಿತ ಪುನಃಸ್ಥಾಪನೆಗೆ ಮನೋಹರ್ ಪರಿಕ್ಕರ್ ರಾಜೀನಾಮೆ ನೀಡಬೇಕೆಂಬ ಬ್ಯಾನರ್ ಗಳನ್ನು ಹಿಡಿದಿದ್ದ ಪ್ರತಿಭಟನಾ ನಿರತರು ಮನೋಹರ್  ಪರಿಕ್ಕರ್ ರಾಜೀನಾಮೆ ನೀಡುವುದಕ್ಕೆ 48 ಗಂಟೆಗಳು ಗಡುವು ವಿಧಿಸಿದ್ದಾರೆ. 
ಎನ್ ಸಿಪಿ ಹಾಗೂ ಶಿವಸೇನೆ ನಾಯಕರೂ ಕಾಂಗ್ರೆಸ್ ಪ್ರತಿಭಟನೆಗೆ ಸಾಥ್ ನೀಡಿದ್ದು, ಈ ಪ್ರತಿಭಟನೆಯಲ್ಲಿ ಎನ್ ಜಿಒ ಕಾರ್ಯಕರ್ತರೂ ಸಹ ಭಾಗಿಯಾಗಿದ್ದರು. "ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅನಾರೋಗ್ಯಕ್ಕೀಡಾಗಿದ್ದು 9 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ, ಆದ್ದರಿಂದ ಮನೋಹರ್ ಪರಿಕ್ಕರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ನಮಗೆ ಪೂರ್ಣಾವಧಿ ಮುಖ್ಯಮಂತ್ರಿಗಳು ಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com