ಚಿಕಾಗೋ ಆಸ್ಪತ್ರೆಯಲ್ಲಿ ಗುಂಡಿನ ದಾಳಿ: ದಾಳಿಕೋರ, ಆಸ್ಪತ್ರೆ ಸಿಬ್ಬಂದಿ ಸಹಿತ ನಾಲ್ವರ ಸಾವು

ಅಮೆರಿಕದ ಚಿಕಾಗೋ ಆಸ್ಪತ್ರೆಯಲ್ಲಿ ಅಪರಿಚತ ವ್ಯಕ್ತಿಯೋರ್ನ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕಾಗೋ ಆಸ್ಪತ್ರೆಯಲ್ಲಿ ದಾಳಿ
ಚಿಕಾಗೋ ಆಸ್ಪತ್ರೆಯಲ್ಲಿ ದಾಳಿ
ಚಿಕಾಗೋ: ಅಮೆರಿಕದ ಚಿಕಾಗೋ ಆಸ್ಪತ್ರೆಯಲ್ಲಿ ಅಪರಿಚತ ವ್ಯಕ್ತಿಯೋರ್ನ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕಾಗೋ ನಗರದ ದಕ್ಷಿಣ ಭಾಗದಲ್ಲಿರುವ ಮರ್ಸಿ ಆಸ್ಪತ್ರೆಯ ಎದುರು ದುಷ್ಕರ್ಮಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ಇಬ್ಬರು ಆಸ್ಪತ್ರೆ ಸಿಬ್ಬಂದಿ, ಓರ್ವ ಭದ್ರತಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಭದ್ರತಾ ಸಿಬ್ಬಂದಿ ದಾಳಿಕೋರನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಆತ ಕೂಡ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪಾರ್ಕಿಂಗ್‌ ಪ್ರದೇಶದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಯನ್ನು ಹತ್ಯೆಗೈದಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸ್‌ ಸಿಬಂದಿಯೊಬ್ಬರು ಕೂಡ ಗಾಯಗೊಂಡಿದ್ದಾರೆ.  ಆಸ್ಪತ್ರೆಯಲ್ಲಿರುವ ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದಾರೆ ಎಂದು ಚಿಕಾಗೋ ಪೊಲೀಸರು ತಿಳಿಸಿದ್ದಾರೆ. ಯಾವ ಉದ್ದೇಶಕ್ಕಾಗಿ ದಾಳಿ ನಡೆದಿದೆ ಎನ್ನುವುದು ತಿಳಿದುಬಂದಿಲ್ಲವಾದರೂ, ಪೊಲೀಸರು ತನಿಖೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com