25ನೇ ವಯಸ್ಸಿನಲ್ಲಿಯೇ ಸುಷ್ಮಾ ಅವರು ಉತ್ತರ ಭಾರತದ ಹರಿಯಾಣ ರಾಜ್ಯದ ಅತ್ಯಂತ ಕಿರಿಯ ಸಂಪುಟ ಸಚಿವೆಯಾಗಿದ್ದರು. 1998ರಲ್ಲಿ ಅಲ್ಪಾವಧಿಗೆ ದೆಹಲಿಯ 5ನೇ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಸೇವೆ ಸಲ್ಲಿಸಿರುವ ಅವರು, ಲೋಕಸಭೆಯಲ್ಲಿ ಬಿಜೆಪಿ ಹಾಗೂ ವಿರೋಧ ಪಕ್ಷದ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದಾರೆ.