ಬಿಎಸ್ ಪಿ ಜೊತೆ ಮೈತ್ರಿ ವಿಫಲ: ಕಾಂಗ್ರೆಸ್ ನ್ನು ದೂಷಿಸಿದ ಅಖಿಲೇಶ್ ಯಾದವ್

ಮಧ್ಯಪ್ರದೇಶದಲ್ಲಿ ಮಹಾಮೈತ್ರಿಕೂಟ ರಚನೆ ವಿಫಲವಾಗಿರುವುದರ ಬಗ್ಗೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು...
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
ಲಖನೌ: ಮಧ್ಯಪ್ರದೇಶದಲ್ಲಿ ಮಹಾಮೈತ್ರಿಕೂಟ ರಚನೆ ವಿಫಲವಾಗಿರುವುದರ ಬಗ್ಗೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು, ಮೈತ್ರಿಕೂಟದಲ್ಲಿ ಬಿಎಸ್ ಪಿಯನ್ನು ಸೇರಿಸಿಕೊಳ್ಳುವುದಕ್ಕೆ ಕಾಂಗ್ರೆಸ್ ಒಪ್ಪದೇ ಇದ್ದ ಹಿನ್ನೆಲೆಯಲ್ಲಿ ಎಸ್ ಪಿ ಸಹ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರ ಉಳಿಯಬೇಕಾಯಿತು ಎಂದು ಹೇಳಿದ್ದಾರೆ. 
ಮಹಾಮೈತ್ರಿಯ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ದೋಷಾರೋಪಣೆ ಮಾಡಿರುವ ಅಖಿಲೇಶ್ ಯಾದವ್, ಬಿಎಸ್ ಪಿ-ಎಸ್ ಪಿ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರೆ ಮಧ್ಯಪ್ರದೇಶದಲ್ಲಿ 200 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. 
ಮಧ್ಯಪ್ರದೇಶ ಹಾಗೂ ರಾಜಸ್ಥಾನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ಅಂತರ ಕಾಯ್ದುಕೊಂಡಿದ್ದ ಬಿಎಸ್ ಪಿ, ಏಕಾಂಗಿಯಾಗಿ ಚುನಾವಣೆ ಎದುರಿಸಲು ನಿರ್ಧರಿಸಿತ್ತು. ಬಿಎಸ್ ಪಿ ನಾಯಕಿ ಮಾಯಾವತಿ ಅವರ ಈ ನಡೆಯಲ್ಲಿ 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಹಾಮೈತ್ರಿಕೂಟಕ್ಕೆ ಉಂಟಾಗಬಹುದಾದ ಹಿನ್ನಡೆ ಎಂದೇ ವಿಶ್ಲೇಷಿಸಲಾಗಿತ್ತು. ಈಗ ಬಿಎಸ್ ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ವಿಫಲವಾದ ಕಾಂಗ್ರೆಸ್ ಬಗ್ಗೆ  ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com