ಕಾಶ್ಮೀರದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ ಪಿಡಿಪಿ, ಎನ್ ಸಿ, ಕಾಂಗ್ರೆಸ್ ಒಪ್ಪಿಕೊಂಡಿವೆ: ಬುಖಾರಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಸರ್ಕಾರ ರಚನೆಗೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ), ನ್ಯಾಷನಲ್ ಕಾನ್ಫರೆನ್ಸ್(ಎನ್ ಸಿ) ಹಾಗೂ....
ಅಲ್ತಾಫ್ ಬುಖಾರಿ
ಅಲ್ತಾಫ್ ಬುಖಾರಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಸರ್ಕಾರ ರಚನೆಗೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ), ನ್ಯಾಷನಲ್ ಕಾನ್ಫರೆನ್ಸ್(ಎನ್ ಸಿ) ಹಾಗೂ ಕಾಂಗ್ರೆಸ್ ಕೈಜೋಡಿಸಲು ಒಪ್ಪಿಕೊಂಡಿವೆ ಎಂದು ಪಿಡಿಪಿ ಹಿರಿಯ ನಾಯಕ್ ಅಲ್ತಾಫ್ ಬುಖಾರಿ ಅವರು ಬುಧವಾರ ಹೇಳಿದ್ದಾರೆ.
ಉದ್ದೇಶಿತ ಮೈತ್ರಿ ಸರ್ಕಾರಕ್ಕೆ 60 ಶಾಸಕರ ಬೆಂಬಲ ಇದೆ ಎಂದು ಉದ್ಯಮಿ, ರಾಜಕಾರಣಿ ಅಲ್ತಾಫ್ ಬುಖಾರಿ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ನೂತನ ಮೈತ್ರಿ ಸರ್ಕಾರ ರಚನೆಗೆ ಪಿಡಿಪಿ, ಎನ್ ಸಿ ಹಾಗೂ ಕಾಂಗ್ರೆಸ್ ನಾಯಕರು ಒಪ್ಪಿಕೊಂಡಿದ್ದಾರೆ. ನಾನು ಒಬ್ಬ ಶಾಸಕನಾಗಿ ಇಷ್ಟನ್ನು ಮಾತ್ರ ಹೇಳಬಲ್ಲೆ ಎಂದು ಬುಖಾರಿ ವರದಿಗಾರರಿಗೆ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಜನತೆಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುತ್ತೇವೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಪಿಡಿಪಿ, ಕಾಂಗ್ರೆಸ್ ಮತ್ತು ಎನ್ ಸಿ ಕೈಜೋಡಿಸಲು ನಿರ್ಧರಿಸಿವೆ ಎಂದು ಬುಖಾರಿ ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಪಿಡಿಪಿ ನಾಯಕ ಬುಖಾರಿ ಅವರು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಹಾ ಅವರನ್ನು ಭೇಟಿ ಮಾಡಿದ್ದರು. ಆದರೆ ಮಾಜಿ ಮುಖ್ಯಮಂತ್ರಿಯೊಂದಿಗೆ ತಾವು ಮೈತ್ರಿ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ.
ಇನ್ನು ಸಮ್ಮಿಶ್ರ ಸರ್ಕಾರ ರಚನೆಯ ಕುರಿತ ವರದಿಗಳನ್ನು ಖಚಿತಪಡಿಸಿದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಅವರು, ಮೂರು ಪಕ್ಷಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದಿದ್ದಾರೆ.
87 ಸದಸ್ಯ ಬಲದ ಕಾಶ್ಮೀರ ವಿಧಾನಸಭೆಯಲ್ಲಿ ಪಿಡಿಪಿ 28, ಎನ್ ಸಿ 15, ಕಾಂಗ್ರೆಸ್ 12 ಹಾಗೂ ಬಿಜೆಪಿ 26 ಸದಸ್ಯರನ್ನು ಹೊಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com