ಈ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರು, ಈಗಾಗಲೇ ರಾಜ್ಯಪಾಲ ಸತ್ಯಪಾಲ್ ಸಿಂಗ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ಹೀಗಾಗಿ ವಿಧಾನಸಭೆ ಚುನಾವಣೆಗೆ ನಾವು ಸಿದ್ಧರಾಗಬೇಕಿದೆ. ಹೀಗಾಗಿ ನಮ್ಮ ಶಾಸಕರ ಸಭೆ ಕರೆದಿದ್ದು, ಚುನಾವಣೆ ಸಂಬಂಧ ಚರ್ಚೆ ನಡೆಸಲಾಗುತ್ತದೆ. ಅಂತೆಯೇ ಮುಂಬರುವ ಲೋಕಸಭಾ ಚುನಾವಣೆಯೊಂದಿಗೇ ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯಬೇಕು ಎಂದು ಹೇಳಿದರು.