ಮುಂಬೈ: ಸಾಲಮನ್ನಾ ಆಗ್ರಹಿಸಿ ರೈತರ ಪ್ರತಿಭಟನೆ: 25 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
ಸಾಲಮನ್ನಾ, ಬರ ಪರಿಹಾರ ಸೇರಿದಂತೆ ನಾನು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾರಾಷ್ಟ್ರದ ರೈತರು ಹಾಗೂ ಬುಡಕಟ್ಟು ಜನಾಂಗದವರು ಗುರುವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ...
ಮುಂಬೈ: ಸಾಲಮನ್ನಾ ಆಗ್ರಹಿಸಿ ರೈತರ ಪ್ರತಿಭಟನೆ: 25 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
ಮುಂಬೈ: ಸಾಲಮನ್ನಾ, ಬರ ಪರಿಹಾರ ಸೇರಿದಂತೆ ನಾನು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾರಾಷ್ಟ್ರದ ರೈತರು ಹಾಗೂ ಬುಡಕಟ್ಟು ಜನಾಂಗದವರು ಗುರುವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ದಕ್ಷಿಣ ಮಹಾರಾಷ್ಟ್ರ, ವಿದರ್ಭ, ಅಹ್ಮದ್ ನಗರ ಸೇರಿದಂತೆ ನಾನಾ ಕಡೆಗಳಂದ ಬಂದು ಮುಂಬೈನ ಆಜಾದ್ ಮೈದಾನದಲ್ಲಿ 25 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಿದ್ದಾರೆ.
ರೈತರ ಈ ಬೃಹತ್ ಹೋರಾಟಕ್ಕೆ ಲೋಕ ಸಂಕರ್ಷ ಮೋರ್ಚಾ, ಆಮ್ ಆದ್ಮಿ ಪಕ್ಷ ಹಾಗೂ ಕೆಲ ಸಾಮಾಜಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.
ಲೋಕ ಸಂಘರ್ಷ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರತಿಭಾ ಶಿಂದೆಯವರು ಮಾತನಾಡಿ, ಶೀಘ್ರದಲ್ಲಿಯೇ ಖಂಡಿತವಾಗಿಯು ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇವೆ. ನಮ್ಮ ಆಗ್ರಹಗಳನ್ನು ಅವರ ಮುಂದಿಡುತ್ತೇವೆ. ಭೇಟಿ ಬಳಿಕವಷ್ಟೇ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯ. ಕಳೆದ 6 ತಿಂಗಳಿನಿಂದ ಶೇ.2 ರಷ್ಟು ಕೂಡ ನೀಡಿದ್ದ ಭರವಸೆ ಕುರಿತು ಕಾರ್ಯಗಳನ್ನು ಮಾಡಿಲ್ಲ ಎಂದು ಹೇಳಿದ್ದಾರೆ.
ಪ್ರತಿಭಟನಾಕಾರರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಅವರು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶೀಘ್ರದಲ್ಲಿಯೇ ನಿಮ್ಮನ್ನು ಭೇಟಿ ಮಾಡಲಿದ್ದಾರೆ. ನಿಮ್ಮ ಸಮಸ್ಯೆಗಳನ್ನು ಇತರೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ನೀಡಲಿದ್ದಾರೆಂದು ಭರವಸೆ ನೀಡಿದ್ದಾರೆ.