2019 ಲೋಕಸಭಾ ಚುನಾವಣೆಯಲ್ಲಿ ಪಾಸ್ವಾನ್ ಸ್ಪರ್ಧಿಸಲ್ಲ, ಆದರೆ, ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆ?
ನವದೆಹಲಿ: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಂತೆ 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್ ಸ್ಪರ್ಧಿಸುವುದಿಲ್ಲ, ಆದರೆ, ಅವರನ್ನು ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಅಸ್ಸಾಂನಿಂದ ರಾಜ್ಯಸಭೆಗೆ ಕಳುಹಿಸಲಾಗುತ್ತದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಬಿಹಾರದಲ್ಲಿ ಜೆಡಿಯು ಹಾಗೂ ಬಿಜೆಪಿ ನಡುವಣ ಸುಗುಮ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಪಾಸ್ವನ್ ಅವರನ್ನು ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆಮಾಡಲು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಬಿಹಾರ ಪ್ಯಾಕೇಜ್ ಸಂಬಂಧ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆಗೆ ಮಾತುಕತೆ ವೇಳೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ಪಾಸ್ವಾನ್ ಅವರನ್ನು ರಾಜ್ಯಸಭೆಗೆ ಕಳುಹಿಸುವ ಚಿಂತನೆ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿ ಇದಕ್ಕೆ ಒಪ್ಪಿಗೆ ನೀಡಿದ್ದಾರೆ .
ಅಸ್ಸಾಂನಿಂದ ಪಾಸ್ವಾನ್ ಗೆಲುವು ಸಾಧಿಸಲು ಬಿಜೆಪಿ ಭರವಸೆ ನೀಡಿದರೆ, ಬಿಹಾರದಲ್ಲಿ ಬಿಜೆಪಿಯ ಇನ್ನೊಂದು ಸ್ಥಾನಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಯು ತಲಾ 18 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ನಾಲ್ಕನ್ನು ಎನ್ ಡಿಎ ಪಾಲುದಾರರಿಗೆ ಬಿಟ್ಟುಕೊಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ