ಪಾಕ್'ನ ಚೀನಾ ರಾಯಭಾರಿ ಕಚೇರಿ ಮೇಲೆ ಉಗ್ರರ ದಾಳಿ: ಭಾರತ ಖಂಡನೆ

ಪಾಕಿಸ್ತಾನ ರಾಜಧಾನಿ ಕರಾಚಿಯಲ್ಲಿರುವ ಚೀನಾ ರಾಯಭಾರಿ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದನ್ನು ಭಾರತ ಶುಕ್ರವಾರ ತೀವ್ರವಾಗಿ ಖಂಡಿಸಿದೆ...
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ನವದೆಹಲಿ: ಪಾಕಿಸ್ತಾನ ರಾಜಧಾನಿ ಕರಾಚಿಯಲ್ಲಿರುವ ಚೀನಾ ರಾಯಭಾರಿ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದನ್ನು ಭಾರತ ಶುಕ್ರವಾರ ತೀವ್ರವಾಗಿ ಖಂಡಿಸಿದೆ. 
ಇಂತಹ ದಾಳಿಗಳು ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಎದುರಿಸಲು ಅಂತರಾಷ್ಟ್ರೀಯ ಸಮುದಾಯದ ನಿರ್ಧಾರವನ್ನು ಮತ್ತಷ್ಟು ಬಲಪಡಿಸುತ್ತದೆ. ಕರಾಚಿಯ ಚೀನಾ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ದಾಳಿಯಲ್ಲಿ ಮೃತಪಟ್ಟವರಿಗಾಗಿ ತೀವ್ರ ಸಂತಾಪ ಸೂಚಿಸುತ್ತೇವೆಂದು ವಿದೇಶಾಂಗ ಸಚಿವಾಲಯ ಹೇಳಿದೆ. 
ಭಯೋತ್ಪಾದನೆ ಯಾವುದೇ ರೂಪದಲ್ಲಿದ್ದರೂ ಅದನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ. ಘೋರ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಂಡು ನ್ಯಾಯ ಒದಗಿಸಬೇಕು ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com