ಮೋದಿ ತಾಯಿ ವಯಸ್ಸಿನೊಂದಿಗೆ ರೂಪಾಯಿ ಮೌಲ್ಯ ಕುಸಿತ ಹೋಲಿಕೆ,ಕಾಂಗ್ರೆಸ್ ಕ್ಷಮೆಗೆ ಬಿಜೆಪಿ ಪಟ್ಟು

ಅಮೆರಿಕಾದ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿತವನ್ನು ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ವಯಸ್ಸಿನೊಂದಿಗೆ ಹೋಲಿಕೆ ಮಾಡಿರುವ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ರಾಜ್ ಬಬ್ಬರ್
ರಾಜ್ ಬಬ್ಬರ್

ನವದೆಹಲಿ:ಅಮೆರಿಕಾದ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿತವನ್ನು ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ವಯಸ್ಸಿನೊಂದಿಗೆ ಹೋಲಿಕೆ ಮಾಡಿರುವ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಮಧ್ಯಪ್ರದೇಶದ ಇಂದೋರ್ ನಲ್ಲಿ ನಿನ್ನೆ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ ಬಬ್ಬರ್  ನರೇಂದ್ರ ಮೋದಿ ಪ್ರಧಾನಿ ಪಟ್ಟಕ್ಕೆ ಬರುವ ಮುಂಚೆ ಅಮೆರಿಕಾದ ಡಾಲರ್ ಎದುರು ರೂಪಾಯಿ ಮೌಲ್ಯ, ಅಂದಿನ ಪ್ರಧಾನಿ ಮನ್ ಮೋಹನ್ ಸಿಂಗ್ ಅವರ ವಯಸ್ಸಿಗಿಂತಲೂ ಕೆಳಮಟ್ಟದಲ್ಲಿದೆ ಎಂದು ಟೀಕಿಸುತ್ತಿದ್ದರು. ಈಗ ರೂಪಾಯಿ ಮೌಲ್ಯ  ಮೋದಿ ಅವರ ತಾಯಿ ವಯಸ್ಸಿಗಿಂತಲೂ ಕೆಳಮಟ್ಟಕ್ಕೆ ತಲುಪಿದೆ ಎಂದು ಟೀಕಿಸಿದ್ದರು.

ಈ ವರ್ಷದಲ್ಲಿ ಅಮೆರಿಕಾದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ನಿರಂತರವಾಗಿ ಕಂಡುಬರುತಿತ್ತು. ಈಗ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡಿದೆ . ಇಂದು ಪ್ರತೀ ಡಾಲರ್ ಗೆ ರೂಪಾಯಿ ಮೌಲ್ಯ 71.11ರೂಗೆ ಏರಿಕೆಯಾಗಿದೆ.  

ರಾಜ್ ಬಬ್ಬರ್  ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಅಸಂವಿಧಾನಿಕ ಪದವನ್ನು ಬಳಸಬಾರದು, ರಾಜಕೀಯದಲ್ಲಿ ಯಾವುದೇ ವ್ಯಕ್ತಿಯ ತಾಯಿಯನ್ನು ತರಬಾರದು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಹೇಳಿದ್ದಾರೆ.

ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ರಾಹುಲ್ ಗಾಂಧಿ  ಒಪ್ಪಿಕೊಳ್ಳುತ್ತಾರೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಮತ್ತು ಕ್ಷಮೆ ಕೋರಬೇಕೆಂದು ಸಂಬೀತ್ ಪಾತ್ರ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com