17 ನಿಮಿಷದಲ್ಲಿ ಬಾಬ್ರಿ ಕೆಡವಿದ್ದೆವು, ರಾಮ ಮಂದಿರಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಇನ್ನೆಷ್ಟು ಸಮಯ ಬೇಕು: ಶಿವಸೇನೆ
17 ನಿಮಿಷಗಳಲ್ಲಿ ಬಾಬ್ರಿ ಮಸೀದಿಯನ್ನು ಕೆಡವಿದ್ದೆವು. ರಾಮ ಮಂದಿರ ನಿರ್ಮಾಣ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರಕ್ಕೆ ಇನ್ನೆಷ್ಟು ಸಮಯ ಬೇಕು ಎಂದು ಶುಕ್ರವಾರ ಶಿವಸೇನೆ ಹೇಳಿದೆ...
ಮುಂಬೈ: 17 ನಿಮಿಷಗಳಲ್ಲಿ ಬಾಬ್ರಿ ಮಸೀದಿಯನ್ನು ಕೆಡವಿದ್ದೆವು. ರಾಮ ಮಂದಿರ ನಿರ್ಮಾಣ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರಕ್ಕೆ ಇನ್ನೆಷ್ಟು ಸಮಯ ಬೇಕು ಎಂದು ಶುಕ್ರವಾರ ಶಿವಸೇನೆ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಶಿವಸೇನೆ ಹಿರಿಯ ನಾಯಕ ಸಂಜಯ್ ರಾವತ್ ಅವರು, 17 ನಿಮಿಷಗಳಲ್ಲಿ ನಾವು ಬಾಬ್ರಿ ಮಸೀದಿಯನ್ನು ಕೆಡವಿದ್ದೆವು. ಸುಗ್ರೀವಾಜ್ಞೆ ಹೊರಡಿಸಲು ಇನ್ನೆಷ್ಟು ಸಮಯ ತೆಗೆದುಕೊಳ್ಳುತ್ತದೆ? ಎಂದು ಪ್ರಶ್ನಿಸಿದ್ದಾರೆ.
ಬಳಿಕ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ಉತ್ತರಪ್ರದೇಶದಲ್ಲಿ ರಾಜ್ಯದಲ್ಲಿ, ಕೇಂದ್ರದಲ್ಲಿ ಹಾಗೂ ರಾಷ್ಟ್ರಪತಿ ಭವನದಲ್ಲಿಯೂ ಬಿಜೆಪಿ ಅಧಿಕಾರದಲ್ಲಿದೆ. ಆಡಳಿತಾರೂಢ ಸರ್ಕಾರ ಶೀಘ್ರಗತಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ರಚಿಸಬೇಕು ಎಂದು ತಿಳಿಸಿದ್ದಾರೆ.
ರಾಮ ಮಂದಿರ ನಿರ್ಮಾಣದ ಪರವಾಗಿ ರಾಜ್ಯಸಭೆಯಲ್ಲಿ ಹಲವಾರು ಸದಸ್ಯರಿದ್ದಾರೆ. ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ವಿರೋಧ ವ್ಯಕ್ತಪಡಿಸುತ್ತಿರುವವರು ಇನ್ನು ಮುಂದೆ ದೇಶದಲ್ಲಿ ಓಡಾಡಬೇಕಾದರೆ, ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.