ತಮ್ಮ ತಾಯಿ ಬಗ್ಗೆ ಲೇವಡಿ ಮಾಡಿದ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ತಮ್ಮ ತಾಯಿಯ ವಯಸ್ಸನ್ನು ರುಪಾಯಿ ಮೌಲ್ಯ ಕುಸಿತಕ್ಕೆ ಹೋಲಿಕೆ ಮಾಡಿದ್ದ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ .....
ನರೇಂದ್ರ ಮೋದಿ
ನರೇಂದ್ರ ಮೋದಿ
Updated on
ಛತ್ತರ್ ಪುರ್: ತಮ್ಮ ತಾಯಿಯ ವಯಸ್ಸನ್ನು ರುಪಾಯಿ ಮೌಲ್ಯ ಕುಸಿತಕ್ಕೆ ಹೋಲಿಕೆ ಮಾಡಿದ್ದ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದು, ನಮ್ಮ ವಿರುದ್ಧ ಮಾತನಾಡಲು ಯಾವುದೇ ವಿಷಯ ಇಲ್ಲದಿರುವುದರಿಂದ ಈ ರೀತಿ ಬೇರೆಯವರ ತಾಯಿಯನ್ನು ನಿಂದಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಇಂದು ಛತ್ತರ್ ಪುರ್ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ನಮ್ಮ ಸರ್ಕಾರಕ್ಕೆ ಈ ದೇಶದ 125 ಕೋಟಿ ಜನ ಹೈಕಮಾಂಡ್. ನಮ್ಮದು ಮೇಡಂನಿಂದ ರಿಮೋಟ್ ಕಂಟ್ರೋಲ್ ಸರ್ಕಾರ ಅಲ್ಲ ಎಂದು ಪರೋಕ್ಷವಾಗಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಮೇಡಂ ಸರ್ಕಾರದ ಅವಧಿಯಲ್ಲಿ ಶ್ರೀಮಂತರಿಗಾಗಿ ಬ್ಯಾಂಕ್ ಗಳ ಬೊಕ್ಕಸಗಳನ್ನು ಖಾಲಿ ಮಾಡಿದ್ದರು. ಆದರೆ ನಮ್ಮ ಸರ್ಕಾರ ಅಗತ್ಯವಿರುವ ಯುವಕರಿಗೆ ಸಾಲ ನೀಡುತ್ತಿದೆ ಎಂದರು.
ಕಳೆದ ಗುರುವಾರ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಅವರು, ಅಮೆರಿಕದ ಡಾಲರ್ ವಿರುದ್ಧ ರುಪಾಯಿ ಮೌಲ್ಯ ಕುಸಿತವನ್ನು ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ವಯಸ್ಸಿನೊಂದಿಗೆ ಹೋಲಿಕೆ ಮಾಡಿದ್ದರು. 
ನರೇಂದ್ರ ಮೋದಿ ಪ್ರಧಾನಿ ಪಟ್ಟಕ್ಕೆ ಏರುವ ಮುನ್ನ ಅಮೆರಿಕದ ಡಾಲರ್ ಎದುರು ರುಪಾಯಿ ಮೌಲ್ಯ, ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ವಯಸ್ಸಿಗಿಂತಲೂ ಕೆಳಮಟ್ಟದಲ್ಲಿದೆ ಎಂದು ಟೀಕಿಸುತ್ತಿದ್ದರು. ಈಗ ಅದೇ ರುಪಾಯಿ ಮೌಲ್ಯ  ಮೋದಿ ಅವರ ತಾಯಿ ವಯಸ್ಸಿಗಿಂತಲೂ ಕೆಳಮಟ್ಟಕ್ಕೆ ತಲುಪಿದೆ ಎಂದು ಬಬ್ಬರ್ ಟೀಕಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com