ಅಯೋಧ್ಯೆ: ಹಿಂದೂಗಳ ಭಾವನೆಗಳೊಂದಿಗೆ ಆಟವಾಡಬೇಡಿ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಭಾನುವಾರ ಹೇಳಿದ್ದಾರೆ.
ರಾಮ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ವಿವಾದ ಸುಪ್ರೀಂಕೋರ್ಟ್ ನಲ್ಲಿಯೇ ಇತ್ಯರ್ಥಗೊಳ್ಳಲಿದೆ ಎಂಬುದೇ ಆದರೆ, ಅಯೋಧ್ಯೆ ವಿಚಾರ ಚುನಾವಣಾ ವಿಚಾರವಾಗಬಾರದು. ಬಿಜೆಪಿ ಹಿಂದೂಗಳ ಭಾವನೆಗಳೊಂದಿಗೆ ಆಟವಾಡಬಾರದು ಎಂದು ಹೇಳಿದ್ದಾರೆ.
ರಾಮ ಮಂದಿರ ವಿಚಾರ ಚುನಾವಣೆಯ ಗಿಮಿಕ್ ಆಗಿದೆಯೇ ಎಂಬುದರ ಕುರಿತಂತೆ ಬಿಜೆಪಿ ಜನರಿಗೆ ಸ್ಪಷ್ಟಪಡಿಸಬೇಕು ಎಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ನಡೆಯುತ್ತಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉದ್ಧವ್ ಠಾಕ್ರೆಯವರು ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಆಗಮಿಸಿದ್ದಾರೆ.