ರಾಮ ಮಂದಿರ ನಿರ್ಮಾಣಕ್ಕೆ ಶಿವಸೇನಾ, ಬಿಜೆಪಿ ಒತ್ತಡ , ಜನರನ್ನು ಮರಳು ಮಾಡಲು ಸಾಧ್ಯವಿಲ್ಲ - ಖರ್ಗೆ

ರಾಮ ಮಂದಿರ ನಿರ್ಮಾಣಕ್ಕೆ ಶಿವಸೇನಾ ಹಾಗೂ ಬಿಜೆಪಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಆದರೆ, ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on: 

ನವದೆಹಲಿ: ರಾಮ ಮಂದಿರ ನಿರ್ಮಾಣಕ್ಕೆ ಶಿವಸೇನಾ ಹಾಗೂ ಬಿಜೆಪಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಆದರೆ, ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಯೋಧ್ಯೆಗೆ  ಭೇಟಿ ನೀಡದಂತೆ ನಾಲ್ಕೈದು ವರ್ಷಗಳಿಂದ ಯಾರು ತಡೆದಿದ್ದರೂ ಎಂದು ಪ್ರಶ್ನಿಸಿರುವ ಮಲ್ಲಿಕಾರ್ಜುನ ಖರ್ಗೆ, ಚುನಾವಣೆ ಹತ್ತಿರವಾಗುತ್ತಿದ್ದಂತೆ  ಅಯೋಧ್ಯೆಗೆ ಭೇಟಿ ನೀಡಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಈಗ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಶಿವಸೇನಾ ಹಾಗೂ ಬಿಜೆಪಿ ಎರಡೂ ಪಕ್ಷಗಳು ಒಂದೇ ಆಗಿದ್ದು, ಜನರನ್ನು ಒಲೈಸಿಕೊಳ್ಳಲು ರಾಮ ಮಂದಿರ ನಿರ್ಮಾಣದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ, ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com