ಎದೆನೋವು ಹಾಗೂ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅಂಬರೀಷ್ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅಂಬರೀಷ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಅವರ ಸಮಾಧಿ ಪಕ್ಕದಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಲಿದೆ.