ಜೈಪುರ: ಡಿಸೆಂಬರ್ 7 ರಂದು ನಡೆಯುವ ರಾಜಸ್ತಾನ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ, ಅದರಲ್ಲಿ 2013ರಲ್ಲಿ ನೀಡಿದ್ದ ಶೇ.94 ರಷ್ಟು ಭರವಸೆ ಈಡೇರಿಸಿರುವುದಾಗಿ ಸಿಎಂ ವಸುಂದರಾ ರಾಜೆ ಹೇಳಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ಪ್ರತೀ ವರ್ಷ 30,000 ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿನ ಖಾಸಗಿ ರಂಗದಲ್ಲಿ 50 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದರು,
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ರಾಜಸ್ಥಾನದಲ್ಲಿ ಡಿಸೆಂಬರ್ 7ರಂದು ಮತದಾನ ನಡೆಯಲಿದ್ದು ಡಿ.11ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.