ಕಾಶ್ಮೀರ: ಮತ್ತೆ ಬಾಲಬಿಚ್ಚಿದ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಸೇನೆ, ಓರ್ವ ಯೋಧ ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಪಹರೆ ನಡೆಸುತ್ತಿದ್ದ ಸೈನಿಕರ ಮೇಲೆ ಗುಂಡಿನ ಮಳೆಗರೆದಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಪಹರೆ ನಡೆಸುತ್ತಿದ್ದ ಸೈನಿಕರ ಮೇಲೆ ಗುಂಡಿನ ಮಳೆಗರೆದಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಕುಲ್ಗಾಮ್ ನಲ್ಲಿ ಈ ಘಟನೆ ನಡೆದಿದ್ದು, ಕುಲ್ಗಾಮ್ ನ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಉಗ್ರರು ಅತ್ತ ಪಹರೆ ನಡೆಸುತ್ತಿದ್ದ ಸೈನಿಕರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಎಚ್ಚೆತ್ತ ಸೈನಿಕರು ಉಗ್ರರು ಅಡಗಿದ್ದ ಕಟ್ಟಡವನ್ನು ಸುತ್ತುವರೆದಿದ್ದು, ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದು, ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಕಟ್ಟಡದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇನ್ನು ಇದೇ ಕಾಶ್ಮೀರದಲ್ಲಿ ಮತ್ತೆ ಎರಡುಕಡೆ ಸೇನಾ ಎನ್ ಕೌಂಟರ್ ನಡೆಯುತ್ತಿದ್ದು, ಪುಲ್ವಾಮ ಜಿಲ್ಲೆಯ ತ್ರಾಲ್ ನಲ್ಲಿ ಉಗ್ರರು ಅಡಗಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com