ಮಿಜೋರಾಂನಲ್ಲಿ ಶೇ.75ರಷ್ಚು ಮತದಾನ, ಹಕ್ಕು ಚಲಾಯಿಸಿದ 108 ವರ್ಷ ವ್ಯಕ್ತಿ ಅತ್ಯಂತ ಹಿರಿಯ ಮತದಾರ

ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗಿರುವ ಪಂಚರಾಜ್ಯಗಳ ಚುನಾವಣೆ ಪೈಕಿ ಬುಧವಾರ ಮಧ್ಯಪ್ರದೇಶ ಮತ್ತು...
ರೋಛಿಂಗ
ರೋಛಿಂಗ
ಐಜ್ವಾಲ್: ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗಿರುವ ಪಂಚರಾಜ್ಯಗಳ ಚುನಾವಣೆ ಪೈಕಿ ಬುಧವಾರ ಮಧ್ಯಪ್ರದೇಶ ಮತ್ತು ಮಿಜೋರಾಂನಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಎರಡೂ ರಾಜ್ಯಗಳಲ್ಲಿ ಶೆ. 75 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಮಿಜೋರಾಂನ ಐಜ್ವಾಲ್ ಪೂರ್ವ-1 ಕ್ಷೇತ್ರದಲ್ಲಿ 108 ವರ್ಷದ ರೋಛಿಂಗ ಎಂಬ ವ್ಯಕ್ತಿ ಇಂದು ಮತದಾನ ಮಾಡಿದ್ದು, ಈ ಮೂಲಕ ಹಕ್ಕು ಚಲಾಯಿಸಿದ ರಾಜ್ಯದ ಅತ್ಯಂತ ಹಿರಿಯ ಮತದಾರ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಹಕ್ಕು ಚಲಾಯಿಸಿದ ಬಳಿಕ ಮಾತನಾಡಿದ ರೋಛಿಂಗ ಅವರು, ನಾನು ಚುನಾವಣೆಯಲ್ಲಿ ಮತದಾನ ಮಾಡುವುದನ್ನು ಯಾವತ್ತೂ ತಪ್ಪಿಸಿಲ್ಲ. ಇದು ನಮ್ಮ ಹಕ್ಕು. ಒಂದು ವೇಳೆ ನಾವು ಮತದಾನ ಮಾಡದಿದ್ದರೆ ಸರ್ಕಾರವನ್ನು ಪ್ರಶ್ನಿಸುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.
ಮಿಜೋರಾಂನಲ್ಲಿ ಈ ಬಾರಿ ಶೇ. 75ರಷ್ಟು ಮತದಾನವಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಮತದಾನದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. 2013ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಶೇ. 83.4ರಷ್ಟು ಮತದಾನವಾಗಿತ್ತು ಎಂದು ಚುನಾವಣಾ ಆಯೋಗ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com