ಹೈದರಾಬಾದ್ ನಿಂದ ಸುಮಾರು 50 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದ್ದು, ಹಕೀಂಪೇಟ್ ಸೇನಾ ನೆಲೆಯಿಂದ ಈ ವಿಮಾನ ಟೇಕ್ ಆಫ್ ಆಗಿತ್ತು. ಹಾರಾಟ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಬಹುಪೇಟಾದಲ್ಲಿ ವಿಮಾನ ನೆಲ ಕಚ್ಚಿದೆ. ಈ ವೇಳೆ ಪೈಲೆಟ್ಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.