ಮರಾಠ ಸಮುದಾಯಕ್ಕೆ ಶೇ.16 ಮೀಸಲಾತಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಶೇಕಡಾ 16 ರಷ್ಟು ಮೀಸಲಾತಿ ನೀಡುವ ಮಸೂದೆ ಮಹಾರಾಷ್ಟ್ರ ವಿಧಾನಸಭೆಯಲ್ಲಿಂದು ಸರ್ವಾನುಮತದಿಂದ ಅಂಗೀಕಾರಗೊಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಮರಾಠ ಸಮುದಾಯಕ್ಕೆ  ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇಕಡಾ 16 ರಷ್ಟು ಮೀಸಲಾತಿ ಒದಗಿಸುವ ಮಸೂದೆ ಮಹಾರಾಷ್ಟ್ರ ವಿಧಾನಸಭೆಯಲ್ಲಿಂದು ಅಂಗೀಕಾರಗೊಂಡಿದೆ.

ಮರಾಠ ಸಮುದಾಯಕ್ಕೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಾಡಿರುವ ಶಿಫಾರಸ್ಸಿನ ಬಗ್ಗೆ ನಿರ್ಣಯ ಕೈಗೊಳ್ಳಲು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಂಡಿಸಿದ ಮಸೂದೆ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. 

ಇದಕ್ಕೂ ಮುನ್ನ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ , ಮರಾಠ ಮೀಸಲಾತಿ ವರದಿಗಾಗಿ ಬಾಕಿ ಇದ್ದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ. ಆದರೆ, ದಾಂಗರ್ ಮೀಸಲಾತಿ ವರದಿ ಪೂರ್ಣಗೊಳಿಸಿಲ್ಲ. ಈ ಸಂಬಂಧ ಉಪಸಮಿತಿ ನೇಮಕ ಮಾಡಲಾಗುವುದು ಎಂದು ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಶೇ, 30 ರಷ್ಟು ಜನಸಂಖ್ಯೆ ಹೊಂದಿರುವ ಮರಾಠ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕು ಎಂಬುದು ಹಲವು ದಿನಗಳ ಬೇಡಿಕೆಯಾಗಿದೆ.
ಈ ಸಂಬಂಧ ಇದೇ ವರ್ಷದ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ನಡೆದ  ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com