ನೀಟ್ ಗೆ 25 ವರ್ಷ ವಯೋಮಿತಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಸಿಬಿಎಸ್ ಇ ನಿಗದಿಪಡಿಸಿದ್ದ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಸಿಬಿಎಸ್ ಇ ನಿಗದಿಪಡಿಸಿದ್ದ ಗರಿಷ್ಠ 25 ವರ್ಷ ವಯೋಮಿತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.
ಗರಿಷ್ಠ 25 ವರ್ಷ ವಯೋಮಿತಿ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, 25 ವರ್ಷ ಮೇಲ್ಪಟ್ಟವರೂ 2019ರ ನೀಟ್  ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ಹೇಳಿದೆ.
ಇದೇ ವೇಳೆ ಕನಿಷ್ಠ ವಯೋಮಿತಿಯಿಂದಾಗಿ ಅರ್ಜಿ ಸಲ್ಲಿಸುವ ಅವಕಾಶ ವಂಚಿತರಾಗಿದ್ದ ಎಂಬಿಬಿಎಸ್ ಹಾಗೂ ಬಿಡಿಎಸ್ ಆಕಾಂಕ್ಷಿ ಅಭ್ಯರ್ಥಿಗಳಿಗೆ ಅರ್ಜಿ ತುಂಬಲು ಒಂದು ವಾರ ಅವಧಿ ವಿಸ್ತರಿಸಿ ಕೋರ್ಟ್​ ಆದೇಶಿಸಿದೆ. ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು.
ನೀಟ್ ಪರೀಕ್ಷೆ ಬರೆಯಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ ಹಾಗೂ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಿ ಸಿಬಿಎಸ್ ಇ ಅಧಿಸೂಚನೆ ಹೊರಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com